ಪುತ್ತೂರು ಮೂಲದ ಕಾರು ಮೂಡಿಗೆರೆಯಲ್ಲಿ ಅಪಘಾತ: ಆರು ಮಂದಿಗೆ ಸಣ್ಣಪುಟ್ಟ ಗಾಯ
ಮೂಡಿಗೆರೆ: ಪುತ್ತೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದ ಪ್ರವಾಸಿಗರ ಕಾರೊಂದು ಚಾಕಲನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೊಟ್ಟಿಗೆಹಾರ ಮತ್ತು ಬಣಕಲ್ ಹೆದ್ದಾರಿಯ ಹೆಬ್ಬರಿಗೆ ಬಳಿ ಭಾನುವಾರ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನಿವಾಸಿಗಳು ಪ್ರವಾಸಕ್ಕೆಂದು ಆಗಮಿಸಿದ್ದರು ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಎರಡು ಪಲ್ಟಿಯಾಗಿದೆ. ಕಾರಿನಲಿದ್ದ ಆರು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.





