November 22, 2024

ಶಿರಾಡಿ ಘಾಟ್ ಬಂದ್ ಹಿನ್ನೆಲೆ: ಬೆಂಗಳೂರು-ಮಂಗಳೂರು ವಿಶೇಷ ರೈಲು ಆರಂಭ

0

ಬೆಂಗಳೂರು: ಶಿರಾಡಿ ಘಾಟ್ ಬಂದ್ ಆದ ಬಳಿಕ ಬೆಂಗಳೂರು-ಮಂಗಳೂರು ನಡುವಿನ ಪ್ರಯಾಣಕ್ಕೆ ತೊಂದರೆ ಉಂಟಾಗಿದೆ.

ಈ ಹಿನ್ನಲೆಯಲ್ಲಿ ಉಭಯ ನಗರಗಳ ನಡುವೆ ಹೆಚ್ಚುವರಿ ರೈಲನ್ನು ಓಡಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದರು. ರೈಲ್ವೆ ಇಲಾಖೆ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.

ಜುಲೈ 26 ರಿಂದ ಆಗಸ್ಟ್ 30ರ ತನಕ ವಾರದಲ್ಲಿ ಮೂರು ದಿನ ವಿಶೇಷ ರೈಲುಗಳು ಸಂಚಾರ ನಡೆಸಲಿವೆ. ಇದರಿಂದಾಗಿ ಕರಾವಳಿ-ಬೆಂಗಳೂರು ನಡುವೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಮತ್ತು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಗಳ ನಡುವೆ ಈ ವಿಶೇಷ ರೈಲು ಸಂಚಾರ ನಡೆಸಲಿದೆ.

ಸುಮಾರು ಒಂದು ತಿಂಗಳ ಕಾಲ ರೈಲು ಸಂಚಾರ ನಡೆಸಲಿದ್ದು, ಬಳಿಕ ಅದನ್ನು ಮುಂದುವರೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ.

ಬೆಂಗಳೂರು-ಮಂಗಳೂರು ನಡುವೆ 06547/ 06548 ಸಂಖ್ಯೆಯ ರೈಲುಗಳು ಸಂಚಾರ ನಡೆಸಲಿವೆ. ವಾರದಲ್ಲಿ ಮೂರು ದಿನಗಳ ಕಾಲ ಈ ವಿಶೇಷ ರೈಲುಗಳು ಸಂಚಾರ ನಡೆಸಲಿವೆ ಎಂದು ರೈಲ್ವೆ ಇಲಾಖೆ ಹೇಳಿದೆ.

Leave a Reply

Your email address will not be published. Required fields are marked *

error: Content is protected !!