August 13, 2026

ಕೊಡಗು: ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವು

0
image_editor_output_image1195130496-1658730201346.jpg

ಕೊಡಗು: ಇಲ್ಲಿನ ನೆಲ್ಯಹುದಿಕೇರಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸೋಮವಾರ ನಸುಕಿನಲ್ಲಿ ಮೃತಪಟ್ಟಿವೆ.

ನೆಲ್ಯಹುದಿಕೇರಿ ಗ್ರಾಮದ ಕೋಣೇರಿರ ಪ್ರಕಾಶ್ ಹಾಗೂ ಸುಮನ್ ಚಂಗಪ್ಪ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ 11 ಕೆ.ವಿ ಸಾಮರ್ಥ್ಯದ ವಿದ್ಯುತ್ ತಂತಿಗಳು ಹಾದುಹೋಗಿವೆ.

ವಿದ್ಯುತ್ ತಂತಿ ಮೇಲೆ ಮರದ ಕೊಂಬೆ ಬಿದ್ದಿದ್ದರಿಂದ ತಂತಿ ಕೆಳಕ್ಕೆ ಬಾಗಿವೆ‌. ತೋಟದಲ್ಲಿ ಕಾಡಾನೆಗಳು ಹಾದು ಹೋಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿದೆ.

ಇದರಿಂದಾಗಿ ಗಂಡು ಕಾಡಾನೆ ಹಾಗೂ ಒಂದು ಹೆಣ್ಣಾನೆ ಸ್ಥಳದಲ್ಲೇ ಸಾವನ್ನಪ್ಪಿವೆ. ಸ್ಥಳಕ್ಕೆ ಅರಣ್ಯ‌ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!