March 26, 2026

ನಟಿ ಕತ್ರಿನಾ ಕೈಫ್, ವಿಕ್ಕಿ ಕೌಶಲ್ ದಂಪತಿಗೆ ಜೀವ ಬೆದರಿಕೆ: ಪ್ರಕರಣ ದಾಖಲು

0
Screenshot_2022-07-25-13-29-10-61_680d03679600f7af0b4c700c6b270fe7.jpg

ಮುಂಬೈ: ಬಾಲಿವುಡ್‌ನ ತಾರಾ ದಂಪತಿ ನಟಿ ಕತ್ರಿನಾ ಕೈಫ್ ಮತ್ತು ನಟ ವಿಕ್ಕಿ ಕೌಶಲ್ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಜೀವ ಬೆದರಿಕೆ ಬಂದಿದೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಈ ಸಂಬಂಧ ಅಪರಿಚಿತ ವ್ಯಕ್ತಿ ವಿರುದ್ಧ ಮುಂಬೈನ ಸಾಂತಾ ಕ್ರೂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಐಪಿಸಿ ಕಾಯ್ದೆ 67 ಮತ್ತು ಐಟಿ ಕಾಯ್ದೆಯಡಿಗಳ ವಿಧಿ 506(2), 354(ಡಿ) ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ಒಬ್ಬ ವ್ಯಕ್ತಿ ತಮಗೆ ಬೆದರಿಕೆ ಒಡ್ಡುತ್ತಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ ಬೆದರಿಸುವ ಪೋಸ್ಟ್ ಮಾಡುತ್ತಿದ್ದಾನೆ. ಪತ್ನಿ ಕತ್ರಿನಾಳನ್ನು ಹಿಂಬಾಲಿಸುತ್ತಿರುವ ಆತ ಅವರಿಗೂ ಬೆದರಿಕೆ ಹಾಕಿದ್ದಾನೆ ಎಂದು ವಿಕ್ಕಿ ಕೌಶಲ್ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!