ಕಾರ್ಕಳ: ತಾಲೂಕು ಕಚೇರಿ ಮಹಿಳಾ ಸಿಬ್ಬಂದಿ ಆತ್ಮಹತ್ಯೆ
ಕಾರ್ಕಳ: ಕಾರ್ಕಳ ತಾಲೂಕು ಕಚೇರಿಯಲ್ಲಿ ಕೆಲ ವರ್ಷದಿಂದ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾತ್ರಿ ನಡೆದಿದೆ.
ಮೃತರನ್ನು ಕಾರ್ಕಳದ ಹುಡ್ಕೋ ಕಾಲನಿ ನಿವಾಸಿ ಸುಶ್ಮಿತಾ (25) ಎಂದು ಗುರುತಿಸಲಾಗಿದೆ.ರವಿವಾರ ರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ.
ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ





