ತುಂಡುಡುಗೆ ತೊಟ್ಟು ಕುಡಿದು ಕಾಲೇಜು ವಿದ್ಯಾರ್ಥಿಗಳಿಂದ ಪಾರ್ಟಿ – ಪಬ್ ಒಳನುಗ್ಗಿ ಪಾರ್ಟಿ ನಿಲ್ಲಿಸಲು ಬಜರಂಗದಳ ಕಾರ್ಯಕರ್ತರಿಂದ ಸೂಚನೆ -ಮಂಗಳೂರಿನ ರಿ-ಸೈಕಲ್ ದಿ ಲಾಂಜ್ ಪಬ್ ನಲ್ಲಿ ಪಾರ್ಟಿ
ತುಂಡುಡುಗೆ ತೊಟ್ಟು ಕುಡಿದು ಕಾಲೇಜು ವಿದ್ಯಾರ್ಥಿಗಳಿಂದ ಪಾರ್ಟಿ – ಪಬ್ ಒಳನುಗ್ಗಿ ಪಾರ್ಟಿ ನಿಲ್ಲಿಸಲು ಬಜರಂಗದಳ ಕಾರ್ಯಕರ್ತರಿಂದ ಸೂಚನೆ -ಮಂಗಳೂರಿನ ರಿ-ಸೈಕಲ್ ದಿ ಲಾಂಜ್ ಪಬ್ ನಲ್ಲಿ ಪಾರ್ಟಿ
ಮಂಗಳೂರಿನಲ್ಲಿ ಪಬ್ ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ತಡೆಯೊಡ್ಡಿದ ಘಟನೆ ನಡೆದಿದೆ. ಮಂಗಳೂರಿನ ರಿ-ಸೈಕಲ್ ದಿ ಲಾಂಜ್ ಪಬ್ ನಲ್ಲಿ ಪಾರ್ಟಿಯಲ್ಲಿ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದರು ಎನ್ನಲಾಗಿದೆ.
ಕಾಲೇಜು ಫೇರ್ ವೆಲ್ ನೆಪದಲ್ಲಿ ಪಬ್ ನಲ್ಲಿ ಯುವಕ – ಯುವತಿಯರು ಕುಡಿದು ಮೋಜು – ಮಸ್ತಿಯಲ್ಲಿ ತೊಡಗಿದ್ದ ಆರೋಪ ವ್ಯಕ್ತವಾಗಿದೆ. ಪದವಿ ವಿದ್ಯಾರ್ಥಿಗಳಿಂದ ಪಬ್ ನಲ್ಲಿ ಮೋಜು ಮಸ್ತಿ ಹಿನ್ನೆಲೆ ಪಾರ್ಟಿ ನಡೆಯುತ್ತಿದ್ದ ರಿ-ಸೈಕಲ್ ದಿ ಲಾಂಜ್ ಪಬ್ ನೊಳಗೆ ಹೋಗಿ ಬಜರಂಗದಳದ ಕಾರ್ಯಕರ್ತರು ಪಾರ್ಟಿ ನಿಲ್ಲಿಸಿದ್ದಾರೆ. ಪಾರ್ಟಿ ನಿಲ್ಲಿಸುವಂತೆ ಸೂಚಿಸಿ ಬಜರಂಗದಖ ಕಾರ್ಯಕರ್ತರು ಬೈದು ವಿದ್ಯಾರ್ಥಿಗಳನ್ನ ಹೊರ ಕಳುಹಿಸಿದ್ದಾರೆ. ಬಳಿಕ ಮಧ್ಯ ಪ್ರವೇಶಿಸಿ ಬಜರಂಗದಳದ ಕಾರ್ಯಕರ್ತರನ್ನ ಪೊಲೀಸರು ಚದುರಿಸಿದ್ದಾರೆ. ಸದ್ಯ ಪಾರ್ಟಿ ಅರ್ಧದಲ್ಲೇ ನಿಲ್ಲಿಸಿ ಕಾಲೇಜು ವಿದ್ಯಾರ್ಥಿಗಳು ಪಬ್ ನಿಂದ ತೆರಳಿದ್ದಾರೆ. ತುಂಡುಡುಗೆ ತೊಟ್ಟು ಕುಡಿದು ವಿದ್ಯಾರ್ಥಿಗಳಿಂದ ಮೋಜು ಮಸ್ತಿ ಹಿನ್ನೆಲೆ ಬಜರಂಗದಳ ಕಾರ್ಯಕರ್ತರು ಪಾರ್ಟಿ ನಿಲ್ಲಿಸಲು ಸೂಚಿಸಿದ್ದಾರೆ ಎನ್ನಲಾಗಿದೆ.






