March 26, 2026

ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಲಾರಿಗೆ ಬೆಂಕಿ

0
image_editor_output_image-1758577538-1658812328055.jpg

ತುಮಕೂರು: ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿಯೇ ಹೊತ್ತಿ ಉರಿದ ಘಟನೆ ತಾಲ್ಲೂಕಿನ ಗೂಳೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ.

ಎಳನೀರು ತುಂಬಿಕೊಂಡು ತುಮಕೂರಿನ ಕಡೆಗೆ ತೆರಳುತ್ತಿದ್ದಾಗ ಘಟನೆ ನಡೆದಿದ್ದು, ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.

ಗೂಳೂರು ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ರಸ್ತೆ ವಿಭಜಕವೇ ಅಪಘಾತಕ್ಕೆ ಕಾರಣ ಎಂದು ಗ್ರಾಮಸ್ಥರು ದೂರಿದ್ದಾರೆ.

Leave a Reply

Your email address will not be published. Required fields are marked *

error: Content is protected !!