March 26, 2026

ಮಡಿಕೇರಿ: 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

0
IMG-20220726-WA0008.jpg

ಮಡಿಕೇರಿ: ಸುಂಟಿಕೊಪ್ಪ ಗ್ರಾಮದ ಸಮೀಪದ ಎಮ್ಮೆಗುಂಡಿ ತೋಟದ ಕಾರ್ಮಿಕ ಅಣ್ಣು ಅವರ ಪುತ್ರಿ ಹರ್ಷಿತಾ (16) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ಬಾಲಕಿ ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಈಕೆ ನಿನ್ನೆ ಶಾಲೆಗೆ ಹೋಗದೇ ಓದಿಕೊಳ್ಳಲೆಂದು ತೋಟದ ಲೈನ್ ಮನೆಯಲ್ಲಿ ಉಳಿದುಕೊಂಡಿದ್ದಳು ಎನ್ನಲಾಗಿದೆ.

ಮನೆಯವರು ಕೆಲಸಕ್ಕೆ ಹೋಗಿದ್ದು, ಸಂಜೆ ಹಿಂತಿರುಗಿ ಬಂದು ನೋಡಿದಾಗ ಮನೆಯೊಳಗೆ ವೇಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಈಕೆಯ ಮೃತದೇಹ ಕಂಡುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎಂದು ಸುಂಟಿಕೊಪ್ಪ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!