March 26, 2026

ನಗ್ನ ಚಿತ್ರಗಳ ಪೋಸ್ಟ್: ನಟ ರಣವೀರ್ ಸಿಂಗ್ ವಿರುದ್ಧ ಪೊಲೀಸ್ ದೂರು

0
image_editor_output_image941261102-1658816008394.jpg

ಮುಂಬೈ: ತಮ್ಮ ನಗ್ನ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ಬಾಲಿವುಡ್ ನಟ ರಣವೀರ್ ಸಿಂಗ್ ಮಹಿಳೆಯರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಮುಂಬೈ ಪೊಲೀಸರಿಗೆ ಅರ್ಜಿಯೊಂದು ಸಲ್ಲಿಕೆಯಾಗಿರುವುದಾಗಿ ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದ್ದಾರೆ.

ಪೂರ್ವ ಮುಂಬೈ ಉಪನಗರ ಮೂಲದ ಸ್ವಯಂಸೇವಾ ಸಂಸ್ಥೆಯೊಂದರ (ಎನ್‌ಜಿಒ) ಕಾರ್ಯಕರ್ತರೊಬ್ಬರು ಚೆಂಬೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಮ್ಮ ನಗ್ನ ಚಿತ್ರಗಳನ್ನು ಪೋಸ್ಟ್ ಮಾಡುವ ಮೂಲಕ ರಣವೀರ್ ಸಿಂಗ್ ಮಹಿಳೆಯರ ಭಾವನಗಳಿಗೆ ಧಕ್ಕೆ ಉಂಟು ಮಾಡಿರುವುದಲ್ಲದೆ, ಅವರ ಘನತೆಗೆ ಕುಂದು ಉಂಟಾಗುವಂತೆ ಮಾಡಿದ್ದಾರೆ ಎಂಬುದಾಗಿ ದೂರುದಾರರು ಉಲ್ಲೇಖಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ದಂಡಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ನಟನ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ದೂರುದಾರರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!