July 18, 2026

ಫೋನ್‌ ಪೇ, ಗೂಗಲ್‌ ಪೇ ಮೂಲಕ ಹಣ ದೋಚುತ್ತಿದ್ದ ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

0
image_editor_output_image-2011854108-1658822582292.jpg

ಕಲಬುರಗಿ: ಮೊಬೈಲ್‌ ಕಳ್ಳತನ ಮಾಡಿ ಫೋನ್‌ ಪೇ ಮತ್ತು ಗೂಗಲ್‌ ಪೇ ಮೂಲಕ ಹಣ ದೋಚುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಸೆನ್‌ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ಒಟ್ಟು 22 ಮೊಬೈಲ್‌ ಗಳು, 3.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ತೆಲಂಗಾಣದ ಕಿರಣ್‌ ರಾಜು ಸಾತಪಾಟಿ ಮತ್ತು ಶಿವಾ ಅಲಿಯಾಸ್‌ ಶಿವಾಜಿ ವೆಂಕಟೇಶ ಉಪ್ಲಾ ಎಂದು ಗುರುತಿಸಲಾಗಿದೆ.

ಬಂಧಿತರಿಂದ ಒಂದು ಕಾರು, 22 ಮೊಬೈಲ್‌ ಜಪ್ತಿ ಮಾಡಿಕೊಳ್ಳಲಾಗಿದೆ. ಮೊಬೈಲ್‌ ಜತೆ ತಮ್ಮ ಖಾತೆಗಳಿಂದ ಹಣ ಕಳೆದುಕೊಂಡವರು ಆಯಾ ಜಿಲ್ಲೆಗಳಲ್ಲಿ ದೂರು ನೀಡಿದ್ದಾರೆ. ಅದನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!