ಗೊನಾಳ್ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಬಾಲಕಿ ಮೃತ್ಯು, 20 ಮಂದಿ ಆಸ್ಪತ್ರೆಗೆ ದಾಖಲು
ಬಳ್ಳಾರಿ: ಜಿಲ್ಲೆಯ ಕಂಪ್ಲಿ ತಾಲೂಕಿನ ಗೊನಾಳ್ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ನಂತರ 11 ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, 20 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಗ್ರಾಮಕ್ಕೆ ದೌಡಾಯಿಸಿ, ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಕುಲಷಿತ ನೀರು ಕುಡಿದ ನಂತರ ಕೆಲವು ಜನರು ಬೇಧಿ, ವಾಂತಿ ಮತ್ತಿತರ ಲಕ್ಷಣಗಳ ಬಗ್ಗೆ ದೂರು ನೀಡಿದ ಬಳಿಕ ಎರಡು ದಿನಗಳ ನಂತರ ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ. ಕಂಪ್ಲಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸುಕನ್ಯಾ ಭಾನುವಾರ ರಾತ್ರಿ ಸಾವನ್ನಪ್ಪಿದ್ದಾಳೆ.
ಆರೋಗ್ಯಾಧಿಕಾರಿಗಳು ನೀರಿನ ಮಾದರಿಯನ್ನು ಸಂಗ್ರಹಿಸಿದ್ದು, ಪರೀಕ್ಷೆಗಾಗಿ ವಿವಿಧ ಪ್ರಯೋಗಾಲಯಗಳಿಗೆ ಕಳುಹಿಸಿದ್ದಾರೆ. ನರಿಹಾಲ ಹೊಳೆ ನೀರು, ಆಹಾರದ ನೀರಿನೊಂದಿಗೆ ಬೆರೆತು ನೀರು ಕಲುಷಿತವಾಗಿರುವುದಾಗಿ ಗೋನಾಳ್ ಗ್ರಾಮಸ್ಥರು ಆರೋಪಿಸಿದ್ದಾರೆ.
ನೀರು ಕಲುಷಿತವಾಗಿರುವಂತೆ ಕಾಣುತ್ತಿದೆ. ಆದರೆ, ಪ್ರಯೋಗಾಲಯದ ಫಲಿತಾಂಶ ಬಂದ ಬಳಿಕವೇ ಅದು ದೃಢವಾಗಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್.ಎಲ್. ಜನಾರ್ಧನಾ ಹೇಳಿದ್ದಾರೆ. ಕಲುಷಿತ