ವಿಟ್ಲ: ಪೆರುವಾಯಿ ಗ್ರಾಮದಲ್ಲಿ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ ಪ್ರಕರಣ:
ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಹಾಗೂ 25 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶ
ವಿಟ್ಲ: 2020 ನೇ ಮಾರ್ಚ್ ತಿಂಗಳಿನಲ್ಲಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ, ಪೆರುವಾಯಿ ಗ್ರಾಮದಲ್ಲಿ ನಡೆದ ತಂದೆಯಿಂದಲೇ ಪುತ್ರಿ ಅತ್ಯಾಚಾರ ಪ್ರಕರಣದ ಆರೋಪಿಗೆ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಮತ್ತು ದಂಡ ವಿಧಿಸಿ ಆದೇಶಿಸಿದೆ.
2020 ನೇ ಮಾರ್ಚ್ ತಿಂಗಳಿನಲ್ಲಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ, ಪೆರುವಾಯಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯೇ ಅತ್ಯಾಚಾರವೆಸಗಿದ್ದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಿಚಾರಣೆ ಕೈಗೆತ್ತಿಕೊಂಡಿದ್ದು, ಆರೋಪಿ ಪ್ರಕರಣದಲ್ಲಿ ನ್ಯಾಯಾಧೀಶರಾದ ಕೆ. ಎಮ್. ರಾಧಕೃಷ್ಣರವರು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಹಾಗೂ 25.000/- ದಂಡ ವಿಧಿಸಿ ತೀರ್ಪು ನೀಡಿದೆ.
ಈ ಪ್ರಕರಣದಲ್ಲಿ ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ಅವರು ಆರೋಪಿಯ ವಿರುದ್ದ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಸರಕಾರ ಅಭಿಯೋಜಕ ವೆಂಕಟರಮಣ ಸ್ವಾಮಿ ಸರ್ಕಾರದ ಪರವಾಗಿ ವಾದಿಸಿದರು.