July 18, 2026

ಮಂಗಳೂರು: ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ: ಅಪರಾಧಿ ತಂದೆಗೆ 20 ವರ್ಷ ಸಜೆ, ದಂಡ

0
image_editor_output_image815083934-1658897987592.jpg

ಮಂಗಳೂರು: 70 ವರ್ಷದ ತಂದೆಯೇ ಮಗಳ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಸಾಬೀತಾಗಿದ್ದು, ಅಪರಾಧಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 20 ವರ್ಷ ಕಠಿನ ಸಜೆ ಮತ್ತು ₹ 25 ಸಾವಿರ ದಂಡ ವಿಧಿಸಿದೆ.

ಸಾಕ್ಷ್ಯಧಾರಗಳನ್ನು ಪರಿಗಣಿಸಿ ನ್ಯಾಯಾಧೀಶರಾದ ಕೆ. ಎಂ. ರಾಧಕೃಷ್ಣ ಅವರು ಈ ಆದೇಶ ಪ್ರಕಟಿಸಿದ್ದಾರೆ.

2020ನೇ ಮಾರ್ಚ್ ತಿಂಗಳಿನಲ್ಲಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ಪ್ರಕರಣದ ತನಿಖೆ ನಡೆಸಿ, ಆರೋಪಿಯ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಸರ್ಕಾರಿ ವಕೀಲ ವೆಂಕಟರಮಣ ಸ್ವಾಮಿ ಸರ್ಕಾರದ ಪರವಾಗಿ ವಾದಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!