March 26, 2026

ಉಳ್ಳಾಲ: ಮಲತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ, ರಕ್ತಸ್ರಾವವಾಗಿ ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲು

0
image_editor_output_image774859998-1658898966061.jpg

ಉಳ್ಳಾಲ : ಮಲತಂದೆಯೋರ್ವ 9 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಕ್ತಸ್ರಾವವಾಗಿ ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಕೊಣಾಜೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಅಶ್ವತ್ಥ್ (25) ಆರೋಪಿ. ಕೇರಳ ಗಡಿಭಾಗದ, ಪತಿಯನ್ನು ತ್ಯಜಿಸಿರುವ ಮಹಿಳೆಯನ್ನು ಮದುವೆಯಾಗಿದ್ದ. ಈಕೆಗೆ ಒಂಬತ್ತು ವರ್ಷದ ಮಗಳಿದ್ದು, ಒಟ್ಟಿಗೆ ಪಾವೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು.

ಮಹಿಳೆ ಗರ್ಭಿಣಿಯಾಗಿದ್ದು, ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಅಶ್ವತ್ಥ್ ಹಾಗೂ ಬಾಲಕಿ ಮನೆಯಲ್ಲಿದ್ದರು.

ಈ ವೇಳೆ ಬಾಲಕಿ ಮೇಲೆ ಆರೋಪಿ ಅತ್ಯಾಚಾರವೆಸಗಿದ್ದು, ವಿಪರೀತ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸುವಾಗ ಪ್ರಕರಣ ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

error: Content is protected !!