ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ:
ವಿಟ್ಲದಲ್ಲಿ ಬಿಗೀ ಬಂದೋ ಬಸ್ತ್, ಶಾಲೆಗಳಿಗೆ ರಜೆ
ವಿಟ್ಲ: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರುರವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕಡಿದು ಹತ್ಯೆಗೈದ ಹಿನ್ನೆಲೆ ಸಂಘ ಪರಿವಾರ ಹಾಗೂ ಬಿಜೆಪಿ ಕಾರ್ಯಕರ್ತರು ವಿಟ್ಲ ಪೇಟೆಯಲ್ಲಿನ ಹಿಂದೂ ಸಮುದಾಯದ ಅಂಗಡಿಗಳಿಗೆ ತೆರಳಿ ಅಂಗಡಿಗಳನ್ನು ಮುಚ್ಚುವಂತೆ ಮನವಿ ಮಾಡಿದರು.



ಅದರಂತೆ ವಿಟ್ಲಪೇಟೆಯಲ್ಲಿ ಕೆಲವೊಂದು ಅಂಗಡಿಗಳು ಮುಚ್ಚಲ್ಪಟ್ಟಿದೆ. ಮುನ್ನೆಚ್ಚರಿಕೆಯಾಗಿ ಕೆಲವೊಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಆದರೆ ಬಸ್ಸು, ಆಟೋ ರಿಕ್ಷಾಗಳು ಈವರೆಗೆ ಎಂದಿನಂತೆ ಓಡಾಟ ನಡೆಸಿವೆ. ಜನಸಂಚಾರ ವಿರಳವಾಗುದ್ದು, ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡದಿಂದ ಎಲ್ಲೆಡೆ ಬಿಗು ಬಂದೋಬಸ್ತು ಏರ್ಪಡಿಸಲಾಗಿದೆ. ಗ್ರಾಮೀಣಭಾಗದಲ್ಲಿ ಎಂದಿನಂತೆ ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಎಲ್ಲೆಡೆ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಾಲಗಿದೆ.
ಗಡಿಪ್ರದೇಶದ ಚೆಕ್ ಪೋಸ್ಟ್ ನಲ್ಲಿ ಹೆಚ್ಚಿದ ವಾಹನ ತಪಾಸಣೆ:
ಘಟನೆ ನಡೆದ ಕೂಡಲೇ ಕೇರಳ ಕರ್ನಾಟಕ ಗಡಿಪ್ರದೇಶಗಳಾದ ಸಾರಡ್ಕ, ಕನ್ಯಾನ, ಸಾಲೆತ್ತೂರು ಚೆಕ್ ಪೋಸ್ಟ್ ಗಳಲ್ಲಿ ವಾಹನ ತಪಾಸಣೆ ಭಿಗುಗೊಳಿಸಲಾಗಿದೆ. ಕರ್ನಾಟಕಕ್ಕೆ ಆಗಮಿಸುವ ಹಾಗೂ ಕೆರಳಕ್ಕೆ ತೆರಳುವ ವಾಹನಗಳ ಬಗ್ಗೆ ತೀವ್ರ ನಿಘಾ ಇರಿಸಲಾಗುತ್ತಿದೆ.




