March 26, 2026

ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಜಾಮೀನು

0
image_editor_output_image-312355666-1658910596795.jpg

ಹೈದರಾಬಾದ್; ಕಳೆದ ಒಂದು ತಿಂಗಳ ಹಿಂದೆ ತೆಲಂಗಾಣದಲ್ಲಿ ರಾಜಕೀಯ ಘರ್ಷಣೆಗೆ ಕಾರಣವಾಗಿದ್ದ ಹೈದರಾಬಾದ್ ನ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಅಪ್ರಾಪ್ತ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿರುವುದಾಗಿ ವರದಿ ತಿಳಿಸಿದೆ.

ಪ್ರಕರಣದಲ್ಲಿ ಶಾಸಕರ ಪುತ್ರ ಸೇರಿದಂತೆ ಎಲ್ಲಾ ನಾಲ್ವರು ಆರೋಪಿಗಳನ್ನು ಜೂನ್ ಮೊದಲ ವಾರದಲ್ಲಿ ಬಂಧಿಸಲಾಗಿದ್ದು, ಇಂದು ಬಾಲಾಪರಾಧಿಗೃಹದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲ ನ್ಯಾಯಮಂಡಳಿಯಿಂದ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾಗುತ್ತಿರುವ ನಾಲ್ವರು ಆರೋಪಿಗಳು ತನಿಖಾಧಿಕಾರಿಗಳಿಗೆ ಸಹಕರಿಸಬೇಕು ಮತ್ತು ಪ್ರತಿ ತಿಂಗಳ ಮೊದಲ ಸೋಮವಾರದಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಹಾಜರಾತಿ ದಾಖಲಿಸುವಂತೆ ಷರತ್ತು ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!