ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ಇಬ್ಬರು ಆರೋಪಿಗಳ ಬಂಧನ
ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಕೇರಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ವಶಕ್ಕೆ ಪಡೆದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಷ್ ಸೋನಾವಣೆ ಮಾಹಿತಿ ನೀಡಿದ್ದಾರೆ
ಮೊಹ್ಮದ್ ಶಫೀಕ್, ಜಾಕೀರ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.
ಅಕ್ಷಯ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿರುವ ಮಧು ರಾಯನ್ ಅವರು ನೀಡಿದ ದೂರಿನಂತೆ ಕೃತ್ಯವೆಸಗಿದ ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಲಾಗಿತ್ತು.




