March 26, 2026

ಪ್ರವೀಣ್ ನೆಟ್ಟಾರು ಹತ್ಯೆ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದೇನು?

0
image_editor_output_image-836421019-1658996704728.jpg

ಪುತ್ತೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೊಹ್ಮದ್‌ ಶಫೀಕ್‌ (27), ಜಾಕೀರ್‌ ಸವಣೂರು (29) ಬಂಧಿತ ಆರೋಪಿಗಳು. ಇಬ್ಬರು ಆರೋಪಿಗಳನ್ನು ಕೇರಳ ಗಡಿ ಪ್ರದೇಶದಲ್ಲಿ ಬಂಧಿಸಲಾಗಿದ್ದು, ಇವರಿಗೆ ಪಿಎಫ್‌ಐ ಸಂಘಟನೆಯ ನಂಟು ಇತ್ತೇ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್‌ಕುಮಾರ್ ತಿಳಿಸಿದ್ದಾರೆ.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಈಗಾಗಲೇ ವಶಕ್ಕೆ ಪಡೆದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ವಿಚಾರಣೆ ನಡೆಯುತ್ತಿದೆ. ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದ್ದು, ತನಿಖೆ ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಷ್‌ ಸೋನಾವಣೆ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!