ಸುಳ್ಯ, ಬೆಳ್ಳಾರೆ, ಸುಬ್ರಹ್ಮಣ್ಯ ನಗರ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಜನ ಜೀವನ ಸಹಜ ಸ್ಥಿತಿಯತ್ತ
ಸುಳ್ಯ: ಮಂಗಳವಾರ ರಾತ್ರಿ ದುಷ್ಕರ್ಮಿಗಳ ದಾಳಿಗೆ ಬಲಿಯಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಿಂದ ಉದ್ವಿಗ್ನಗೊಂಡು ಬಂದ್ ಆಗಿದ್ದ ಸುಳ್ಯ, ಬೆಳ್ಳಾರೆ ಸಹಿತ ತಾಲೂಕಿನಾದ್ಯಂತ ಜನಜೀವನ ಸಹಜ ಸ್ಥಿತಿಗೆ ಮರಳಿದೆ.
ಸುಳ್ಯ, ಬೆಳ್ಳಾರೆ, ಸುಬ್ರಹ್ಮಣ್ಯ ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಜನ ಜೀವನ ಎಂದಿನಂತೆ ಸಹಜ ಸ್ಥಿತಿಗೆ ಮರಳಿದ್ದು, ಬಂದ್ ಆಗಿದ್ದ ಅಂಗಡಿ – ಮುಂಗಟ್ಟುಗಳು ತೆರೆದಿದ್ದು ವ್ಯವಹಾರ ಆರಂಭಗೊಂಡಿದೆ. ವಾಹನ, ಬಸ್, ಜನ ಸಂಚಾರ ಎಂದಿನಂತೆ ಸಂಚರಿಸುತ್ತಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಆಯಾ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.