August 13, 2026

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬಂಧಿತ ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

0
image_editor_output_image1976048673-1659019995129

ಮಂಗಳೂರು :  ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ವಿಧಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಾದ ಜಾಕೀರ್ ಮತ್ತು ಶಫೀಕ್ ನನ್ನು ಪೊಲೀಸರು ನ್ಯಾಯಾಲಕಕ್ಕೆ  ಹಾಜರುಪಡಿಸಿದ್ದು, ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪೊಲೀಸ್ ವಶಕ್ಕೆ ಕೇಳದ ಹಿನ್ನೆಲೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.  ತನಿಖೆ ಅಗತ್ಯವಿದ್ದಲ್ಲಿ ಆರೋಪಿಗಳನ್ನ ಪೊಲೀಸ್ ಕಸ್ಟಡಿಗೆ ಮನವಿ ಮಾಡುವುದಾಗಿ ವಕೀಲರು ಸ್ಪಷ್ಟಪಡಿಸಿದರು.

ಕಾಸರಗೋಡಿನಲ್ಲಿ ಈ ಇಬ್ಬರನ್ನು ಬಂಧಿಸಲಾಗಿದ ಎಂದು ದಕ್ಷಿಣ ಕನ್ನಡ ಎಸ್‌ಪಿ ರಿಷಿಕೇಶ್‌ ಹೇಳಿದ್ದಾರೆ.  ಬಂಧಿತ ಇಬ್ಬರೂ ಆರೋಪಿಗಳು ಬೆಳ್ಳಾರೆ ಹಾಗೂ ಸವಣೂರಿನವರು ಎಂದು ಗೊತ್ತಾಗಿದೆ. ಆದ್ರೆ ಕೊಲೆ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ.  ಇನ್ನು ಈ ಬಗ್ಗೆ ಮಾತನಾಡಿರುವ ಎಡಿಜಿಪಿ ಅಲೋಕ್‌ ಕುಮಾರ್‌, ಇದುವರೆಗೆ 21 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದೇವೆ. ಬೇರೆ ಬೇರೆ ಸಂಘಟನೆಗಳಿಗೆ ಸೇರಿದವರಾಗಿದ್ದಾರೆ. ಅವರನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದ್ದು, ತಪ್ಪಿತಸ್ಥರನ್ನು ಪತ್ತೆ ಹಚ್ಚುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

You may have missed

error: Content is protected !!