ಕೆರೆಗೆ ಉರುಳಿದ ಬಸ್:
ಪ್ರಯಾಣಿಕರು ಅಪಾಯದಿಂದ ಪಾರು
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಯಲ್ಲಂಪಲ್ಲಿ ಬಳಿ ಕೆಎಸ್ ಆರ್ ಟಿಸಿ ಬಸ್ ಕೆರೆಗೆ ಉರುಳಿದ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ 15 ಪ್ರಯಾಣಿಕರು ಗಂಭೀರ ಗಾಯಗೊಳ್ಳದೆ ಪಾರಾಗಿದ್ದಾರೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ ಬಾಗೇಪಲ್ಲಿಯಿಂದ ಚಿಂತಾಮಣಿ ನಗರಕ್ಕೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಬಸ್ಸಿನ ಎಕ್ಸಲ್ ಕಟ್ ಆಗಿ ಕೆರೆಗೆ ಉರುಳಿ ಬಿದ್ದಿದೆ ಎಂದು ಹೇಳಲಾಗಿದೆ. ಬಸ್ ನಲ್ಲಿ ಇದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಬಾಗೇಪಲ್ಲಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ ಕೆರೆಯಲ್ಲಿ ಕಡಿಮೆ ನೀರು ಇರುವ ಕಡೆ ಉರುಳಿ ಬಿದ್ದಿರುವ ಕಾರಣ ಯಾವುದೇ ಗಂಭೀರ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.





