March 26, 2026

ಫಾಝಿಲ್ ಕೊಲೆ – ಸುರತ್ಕಲ್, ಮುಲ್ಕಿ, ಪಣಂಬೂರು ಮತ್ತು ಬಜಪೆ ಠಾಣಾ ವ್ಯಾಪ್ತಿಗಳಲ್ಲಿ ಶಾಲಾ – ಕಾಲೇಜುಗಳಿಗೆ ರಜೆ – ಜಿಲ್ಲಾಧಿಕಾರಿ

0
image_editor_output_image2045535055-1659026415861

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ ಕೊಲೆ ಪ್ರಕರಣಗಳ ಬೆನ್ನಿಗೇ ನಗರ ಹೊರವಲಯದ ಸುರತ್ಕಲ್​​ನಲ್ಲಿ ಮತ್ತೊಬ್ಬ ಯುವಕನ ಕೊಲೆಯಾಗಿದೆ. ಫಾಜಿಲ್​ ಮಂಗಲಪೇಟೆ  (23) ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ನಗರದ ಸುರತ್ಕಲ್​, ಮುಲ್ಕಿ ಪೊಲೀಸ್ ಠಾಣೆ, ಬಜ್ಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವ್ಯಾಪಕ ಪೊಲೀಸ್ ಬಂದೋಬಸ್ತ್​ ಹಾಕಲಾಗಿದ್ದು, ಸುರತ್ಕಲ್​ನ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ನಿರಂತರ ಗಸ್ತು ತಿರುಗುತ್ತಿದ್ದಾರೆ. ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಹತ್ಯೆಯ ಹಿನ್ನೆಲೆಯಲ್ಲಿ ಸಾಮಾಜಿಕ ವಾತಾವರಣ ಕಾವೇರಿರುವುದರಿಂದ ಸುರತ್ಕಲ್, ಪಣಂಬೂರು, ಬಜ್ಪೆ, ಮುಲ್ಕಿ ಸುತ್ತಮುತ್ತಲ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಜೆ ಕೊಡುವಂತೆ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರಿಗೆ ಪೊಲೀಸ್ ಕಮಿಷನರ್ ಎನ್​.ಶಶಿಕುಮಾರ್ ವಿನಂತಿಸಿದ್ದರು.

ನಿಷೇಧಾಜ್ಞೆ ಇರುವ ಸೂಕ್ಷ್ಮ ಪ್ರದೇಶಗಳ ಮಸೀದಿಗಳಲ್ಲಿ ಇಂದು ಪ್ರಾರ್ಥನೆ ಬೇಡ ಎಂದು ಮುಸ್ಲಿಮರಿಗೆ ಪೊಲೀಸರು ಮನವಿ ಮಾಡುತ್ತಿದ್ದಾರೆ. ಮನೆಗಳಲ್ಲಿ ಅಥವಾ ನಿಷೇಧಾಜ್ಞೆ ಇಲ್ಲದ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಿ ಪ್ರಾರ್ಥನೆ ಮಾಡುವಂತೆ ಪೊಲೀಸರು ವಿನಂತಿಸಿದ್ದಾರೆ.ಸುಳ್ಯ

Leave a Reply

Your email address will not be published. Required fields are marked *

error: Content is protected !!