March 26, 2026

ಮಂಗಳಪೇಟೆ ಫಾಝಿಲ್ ಕೊಲೆ ಪ್ರಕರಣ: 14 ಮಂದಿಯ ವಶಕ್ಕೆ

0
image_editor_output_image1927324367-1659072047018.jpg

ಸುರತ್ಕಲ್: ಮಂಗಳಪೇಟೆ ನಿವಾಸಿ ಫಾಝಿಲ್ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 13 ರಿಂದ 14 ಜನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ 13 ರಿಂದ 14 ಜನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಈ ಘಟನೆ ಬಗ್ಗೆ ಪ್ರತ್ಯಕ್ಷದರ್ಶಿಗಳನ್ನು ಕೂಡ ವಿಚಾರಣೆ ಮಾಡುತ್ತಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತೇವೆ ಎಂದರು.

ಇನ್ನು ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ರಾತ್ರಿ 10 ಗಂಟೆ ನಂತರ ಸಂಚರಿಸುವ ಎಲ್ಲಾ ವಾಹನಗಳ ತಪಸಣೆ ಮಾಡಲಾಗುತ್ತಿದೆ ಎಂದಿದ್ದಾರೆ.

ಈಗಾಗಲೇ ಕಮೀಷನರೇಟ್ ವ್ಯಾಪ್ತಿಯಲ್ಲಿ ಮಧ್ಯ ಮಾರಾಟ ನಿಷೇಧಿಸಲಾಗಿದ್ದು, ಸಾರ್ವಜನಿಕರು ಅನವಶ್ಯಕವಾಗಿ ಓಡಾಡುವಂತಿಲ್ಲ. ಯಾವುದೇ ಅಹಿತಕರ ಘಟನೆಗಳು ನಡೆಯುವಂತೆ ಮುಂಜಾಗ್ರತೆ ವಹಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!