ಕ್ರೇನ್ ತಂತಿ ತುಂಡಾಗಿ ಐವರು ಕಾರ್ಮಿಕರು ಸ್ಥಳದಲ್ಲೇ ಮೃತ್ಯು
ಹೈದರಾಬಾದ್: ತೆಲಂಗಾಣದ ನಾಗರ ಕರ್ನೂಲ್ ಜಿಲ್ಲೆಯ ಪಾಲಮುರು ಏತ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಕ್ರೇನ್ ತಂತಿ ತುಂಡಾಗಿ ಐವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅವಘಡದಲ್ಲಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತೆಲಂಗಾಣ ಸರ್ಕಾರ ₹35,000 ಕೋಟಿ ವೆಚ್ಚದಲ್ಲಿ ಕೃಷ್ಣಾ ನದಿಗೆ ನಿರ್ಮಿಸುತ್ತಿರುವ ಪಾಲಮುರು ರಂಗಾರೆಡ್ಡಿ ಏತ ನೀರಾವರಿ ಯೋಜನೆಯ ಕಾಮಗಾರಿ ನಾಗರ ಕರ್ನೂಲ್ ಜಿಲ್ಲೆಯ ಕೊಲ್ಲಾಪುರ ಮಂಡಲದ ರೆಗುಮಾನ ಗಡ್ಡಾದಲ್ಲಿ ನಡೆಯುತ್ತಿದೆ.
ನಿರ್ಮಾಣ ಹಂತದಲ್ಲಿದ್ದ ಪ್ಯಾಕೇಜ್-1ರಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಪೂರ್ವ ಗೋದಾವರಿ ಜಿಲ್ಲೆಯ ಸಿನು (35), ಜಾರ್ಖಂಡ್‌ನ ಭೋಲಾನಾಥ್ (40), ಬಿಹಾರ ಮೂಲದ ಪ್ರವೀಣ್, ಕಮಲೇಶ್ ಮತ್ತು ಸೋನು ಕುಮಾರ್ ಎಂದು ಗುರುತಿಸಲಾಗಿದೆ.