ನಿರ್ಬಂಧವಿದ್ದರೂ ಮಂಗಳೂರಿಗೆ ಬಂದ ಪ್ರಮೋದ್ ಮುತಾಲಿಕ್: ವಶಕ್ಕೆ ಪಡೆದ ಪೊಲೀಸರು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಕಾರಣದಿಂದ ಶಾಂತಿ ಸೌಹಾರ್ದತೆ ಕಾಪಾಡುವ ದೃಷ್ಠಿಯಿಂದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ನಗರ ಪ್ರವೇಶಿಸಲು ನಿರ್ಬಂಧ ಹೇರಲಾಗಿದೆ.
ಆದರೆ ನಿರ್ಬಂಧವಿದ್ದರೂ ನಗರಕ್ಕೆ ಬಂದ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳ್ಳಾರೆ ಮಸೂದ್, ಪ್ರವೀಣ್ ನೆಟ್ಟಾರು ಮತ್ತು ಫಾಝಿಲ್ ಕೊಲೆ ಪ್ರಕರಣಗಳಿಂದ ಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ನಿರ್ಬಂಧ ಹೇರಲಾಗಿತ್ತು.
ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು, ಮಂಗಳೂರು ನಗರ ಸಹಿತ ಪೊಲೀಸ್ ಕಮಿಷನರೆಟ್ ವ್ಯಾಪ್ತಿಗೆ ಪ್ರವೇಶಿಸುವುದಕ್ಕೆ ಪ್ರಮೋದ್ ಮುತಾಲಿಕ್ ಅವರಿಗೆ ನಿರ್ಬಂಧ ಹೇರಿ ಗುರುವಾರ ಆದೇಶ ಹೊರಡಿಸಿದ್ದರು.