ಬೆಳ್ಳಾರೆ, ಸುಬ್ರಹ್ಮಣ್ಯ ಎಸೈಗಳ ದಿಢೀರ್ ವರ್ಗಾವಣೆ: ವಿಟ್ಲ ಪಿಎಸ್ ಐ ಮಂಜುನಾಥ್ ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿ.ಎಸ್.ಐ ಗಳನ್ನು ದಿಢೀರ್ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
ವಿಟ್ಲ ಠಾಣೆಯ ಪಿಎಸ್ ಐ ಮಂಜುನಾಥ್ ರವರನ್ನು ಸುಬ್ರಹ್ಮಣ್ಯ ಠಾಣೆಗೆ, ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್ ಐ ಸುಹಾಸ್ ಆರ್. ರನ್ನು ಬೆಳ್ಳಾರೆ ಠಾಣೆಗೆ, ಚಿಕ್ಕಮಗಳೂರು ಯುಗಟಿ ಠಾಣೆಯ ಪಿಎಸ್ಐ ಧನಂಜಯ ಡಿ. ಹೆಚ್. ರನ್ನು ವಿಟ್ಲ ಠಾಣೆಗೆ ವರ್ಗಾವಣೆಗೊಳಿಸಿ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋತಿ ರೇ ರವರು ಆದೇಶ ನೀಡಿದ್ದಾರೆ.
ಪ್ರವೀಣ್ ರವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಅಂತಿಮ ನಮನ ಸಲ್ಲಿಸಲು ಬಂದಿದ್ದ ಆರ್.ಎಸ್.ಎಸ್. ನ ಹಿರಿಯ ಕಾರ್ಯಕರ್ತರೊಬ್ಬರ ಮೇಲೆ ಪೊಲೀಸರು ಲಾಠಿ ಏಟು ನೀಡಿದ್ದು, ಈ ಹಿನ್ನೆಲೆ ಬೆಳ್ಳಾರೆ, ಸುಬ್ರಹ್ಮಣ್ಯ ಠಾಣೆಯ ಎಸ್.ಐ ಮತ್ತು ಇತರ ಪೊಲೀಸರನ್ನು ಅಮಾನತುಗೊಳಿಸಬೇಕೆಂದು ಕೂಗು ಕೇಳಿ ಬಂದಿತ್ತು. ಈ ಹಿನ್ನೆಲೆ ಅವರನ್ನು ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಇತರ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎನ್ನಲಾಗುತ್ತಿದೆ.