15 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: 8 ಮಂದಿ ಮೃತ್ಯು
ಮಾಸ್ಕೊ: ರಷ್ಯಾದ ಮಾಸ್ಕೊದಲ್ಲಿ 15 ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಮಾಸ್ಕೊದ ಆಗ್ನೇಯ ಜಿಲ್ಲೆಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಕಟ್ಟಡವನ್ನು ಬೆಂಕಿ ಆವರಿಸಿದೆ. ಸತತ ಕಾರ್ಯಾಚರಣೆಯ ಬಳಿಕ ಮಧ್ಯರಾತ್ರಿಯ ಬಳಿಕ ಬೆಂಕಿಯನ್ನು ನಂದಿಸಲಾಗಿದೆ. 200ಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ತುರ್ತು ಸೇವೆ ಅಧಿಕಾರಿಗಳು ತಿಳಿಸಿದ್ದಾರೆ.




