ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ NIAಗೆ ವರ್ಗಾವಣೆ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು : ಸುಳ್ಯದ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶುಕ್ರವಾರ ತೀರ್ಮಾನ ಕೈಗೊಂಡಿದ್ದಾರೆ.
ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಡಿಜಿ ಐಜಿಪಿ ಪ್ರವೀಣ್ ಸೂದ್ ಜೊತೆ ಚರ್ಚೆ ಮಾಡಿದ್ದೇನೆ. ಪ್ರವೀಣ್ ಹತ್ಯೆ ಆರ್ಗನೈಸಡ್ ಕ್ರೈಂ. ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ ಎಂದರು.
ಪ್ರಕರಣದ ತನಿಖೆ ತ್ವರಿತ ಗತಿಯಲ್ಲಿ ನಡೆಯುತ್ತಿದೆ. ಪ್ರಕರಣ ಎರಡು ರಾಜ್ಯಕ್ಕೆ ಸಂಬಂಧಿಸಿದ್ದಾಗಿದ್ದು, ಪ್ರಕರಣವನ್ನು ಎನ್ಐಎ ಗೆ ವಹಿಸಲು ತೀರ್ಮಾನಿಸಿದ್ದೇವೆ, ಅದಕ್ಕೆ ಸಂಬಂಧಿಸಿದಂತೆ ಎನ್ ಐಎಗೆ ಪತ್ರ ಬರೆಯುವುದಕ್ಕೆ ಹೇಳಿದ್ದೇನೆ ಎಂದರು.