August 12, 2026

ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸಕ್ಕೆ ಎಬಿವಿಪಿ ಸೇರಿದಂತೆ ಸಂಘಪರಿವಾರ ಕಾರ್ಯಕರ್ತರಿಂದ ನುಗ್ಗಲು ಯತ್ನ: ಪೊಲೀಸರಿಂದ ಲಾಠಿಚಾರ್ಜ್

0
image_editor_output_image403930306-1659160276562.jpg

ಬೆಂಗಳೂರು:  ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜಯಮಹಲ್ ನಲ್ಲಿರುವ ನಿವಾಸಕ್ಕೆ ಎಬಿವಿಪಿ ಸೇರಿದಂತೆ ಸಂಘಪರಿವಾರ ಸಂಘಟನೆಗಳ ಕಾರ್ಯಕರ್ತರು ನುಗ್ಗಲು ಯತ್ನಿಸುವಾಗ ಪೊಲೀಸರು ಲಾಠಿಚಾರ್ಜ್ ಮಾಡಿ ಹರಸಾಹಸಪಟ್ಟು ತಡೆದ ಘಟನೆ ನಡೆದಿದೆ.

ರಾಜ್ಯ ಸರ್ಕಾರದ ವಿರುದ್ಧ ಇತ್ತೀಚೆಗೆ ಕರಾವಳಿಯಲ್ಲಿ ನಡೆದ ಸರಣಿ ಹತ್ಯೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಸರ್ಕಾರದ ಗಮನ ಸೆಳೆಯಲು ಎಬಿವಿಪಿ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಗೃಹ ಸಚಿವರಿಗೆ ಮನವಿ ಸಲ್ಲಿಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಗೃಹ ಸಚಿವರ ನಿವಾಸ ಮುಂದೆ ಪ್ರತಿಭಟನೆ ನಡೆಸಲು ಬಿಡಲಿಲ್ಲ. 

ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ  ಹಿಂದೂಪರ ಸಂಘಟನೆಗಳು ಒತ್ತಾಯಿಸುತ್ತಿದ್ದಾರೆ. ಸದ್ಯ ಬೆಂಗಳೂರಿನ ಜಯಮಹಲ್ ನಲ್ಲಿ ಗೃಹ ಸಚಿವರ ಮನೆ ಮುಂದೆ ಪರಿಸ್ಥಿತಿ ಬಿಗಡಾಯಿಸಿದೆ. ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಸ್ಥಳದಿಂದ ಬೇರೆಡೆಗೆ ಕರೆದೊಯ್ದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!