ವಿದ್ಯಾರ್ಥಿಯಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ: ವೀಡಿಯೋ ವೈರಲ್, ಸರಕಾರಿ ಶಾಲಾ ಶಿಕ್ಷಕಿ ಅಮಾನತು
ಲಕ್ನೋ: ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದೀಗ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ.
ಹರ್ದೋಯಿಯ ಪೋಖಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕಿಯನ್ನು ಊರ್ಮಿಳಾ ಸಿಂಗ್ ಎಂದು ಗುರುತಿಸಲಾಗಿದೆ. ವೀಡಿಯೋದಲ್ಲಿ ಶಿಕ್ಷಕಿ ಕುರ್ಚಿ ಮೇಲೆ ಕುಳಿತುಕೊಂಡು ಆರಾಮವಾಗಿ ವಿಶ್ರಾಂತಿ ಪಡೆಯುತ್ತಿದ್ದರೆ, ವಿದ್ಯಾರ್ಥಿ ಪಕ್ಕದಲ್ಲಿ ನಿಂತುಕೊಂಡು ಮಸಾಜ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ಶಿಕ್ಷಕಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.