ಸುರತ್ಕಲ್: ಎಸಿಪಿ ಮಹೇಶ್ ಕುಮಾರ್ ಗೆ ಫಾಝಿಲ್ ಹತ್ಯೆಯ ತನಿಖೆಯ ಹೊಣೆ: ಕಮಿಷನರ್ ಎನ್ ಶಶಿಕುಮಾರ್ ಆದೇಶ
ಮಂಗಳೂರು: ಸುರತ್ಕಲ್ನಲ್ಲಿ ನಡೆದ ಮಹಮ್ಮದ್ ಫಾಝಿಲ್ ಹತ್ಯೆಯ ತನಿಣೆಯ ಹೊಣೆಯನ್ನು ಮಂಗಳೂರು ಪೊಲೀಸ್ ಕಮಿಷನರೇಟ್ನ ಎಸಿಪಿ ಮಹೇಶ್ ಕುಮಾರ್ ಅವರಿಗೆ ವಹಿಸಿ ನಗರ ಪೊಲೀಸ್ ಕಮಿನಷರ್ ಎನ್.ಶಶಿಕುಮಾರ್ ಅವರು ಭಾನುವಾರ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಸುರತ್ಕಲ್ ಠಾಣೆಯ ಇನ್ಸ್ಪೆಕ್ಟರ್ ಚಂದ್ರಪ್ಪ ಅವರು ಈ ಪ್ರಕರಣ ತನಿಖೆ ನಡೆಸುತ್ತಿದ್ದರು. ಪ್ರಕರಣದ ತನಿಖೆಯನ್ನು ಉನ್ನತ ಅಧಿಕಾರಿಗಳಿಂದ ನಿಕ್ಷ್ಪಕ್ಷಪಾತವಾಗಿ ನಡೆಸುವಂತೆ ಫಾಝಿಲ್ ಅವರ ತಂದೆ ಉಮರ್ ಫಾರೂಕ್ ಅವರು ಕೋರಿಕೆ ಸಲ್ಲಿಸಿದ್ದರು. ಆದ್ದರಿಂದ ಎಸಿಪಿ ಮಹೇಶ್ ಕುಮಾರ್ ಅವರನ್ನು ತನಿಖಾಧಿಕಾರಿಯನ್ನಾಗಿ ನಿಯೋಜಿಸಲಾಗಿದೆ ಎಂದು ಶಶಿಕುಮಾರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.