March 26, 2026

ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಭೇಟಿ: 5 ಲಕ್ಷ ರೂ. ಚೆಕ್ ವಿತರಣೆ

0
IMG-20220801-WA0040.jpg

ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿ ಪ್ರವೀಣ್ ತಂದೆ, ತಾಯಿ ಹಾಗೂ ಪತ್ನಿಗೆ ಸಾಂತ್ವನ ಹೇಳಿ ಸಹಾಯಧನದ ಚೆಕ್ ವಿತರಿಸಿದರು. ಕುಮಾರಸ್ವಾಮಿ ಅವರು ಮನೆಯವರಿಗೆ 5 ಲಕ್ಷ ರೂ ಚೆಕ್ ವಿತರಿಸಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಎಂ.ಎಲ್.ಸಿ ಬಿ.ಎಂ ಫಾರೂಕ್, ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ಪುತ್ತೂರು ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ, ದಯಾಕರ ಆಳ್ವ, ಎಂ.ಬಿ ಸದಾಶಿವ, ಮಹಮ್ಮದ್ ಕುಂಞ, ವಸಂತ ಪೂಜಾರಿ, ರತ್ನಾಕರ ಸುವರ್ಣ, ಪ್ರವೀಣ್ ಚಂದ್ರ ಜೈನ್, ಜಮೀರ್ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!