March 26, 2026

ಹತ್ಯೆಗೀಡಾದ ಮಸೂದ್ ಮನೆಗೆ ಮಾಜಿ ಸಿ.ಎಂ ಎಚ್ ಡಿ ಕುಮಾರ ಸ್ವಾಮೀ ಭೇಟಿ-5 ಲಕ್ಷ ರೂ. ಚೆಕ್ ವಿತರಣೆ

0
image_editor_output_image1058600186-1659339882235

ಸುಳ್ಯ: ಇತ್ತೀಚೆಗೆ ದುಷ್ಕರ್ಮಿಗಳಿಂದ ಹಲ್ಲೆಗೀಡಾಗಿ ಹತ್ಯೆಯಾದ ಕಳಂಜ ಗ್ರಾಮದ ಮಸೂದ್ ಅವರ ಮನೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಬೆಳಗ್ಗೆ ಭೇಟಿ ನೀಡಿದ್ದಾರೆ.

ಮನೆಯಲ್ಲಿದ್ದ ಮಸೂದ್ ಅವರ ಸಹೋದರರು, ಚಿಕ್ಕಪ್ಪ ಸೇರಿ ಇಡೀ ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಮುಖ್ಯಮಂತ್ರಿ, ಸಂತ್ರಸ್ತ ಕುಟುಂಬಕ್ಕೂ ಪರಿಹಾರವಾಗಿ 5 ಲಕ್ಷ ರೂ. ಚೆಕ್ ಅನ್ನು ಹಸ್ತಾಂತರ ಮಾಡಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮಸೂದ್ ಅಮಾಯಕ. ಪೈಂಟರ್ ಆಗಿ ದುಡಿಯುತ್ತಿದ್ದ ಆತ ಯಾವುದೇ ಸಂಘಟನೆಗಳಲ್ಲಿ ಗುರುತಿಸಿಕೊಂಡಿರಲಿಲ್ಲ. ಈ ಬಗ್ಗೆ ನನಗೆ ಲಭಿಸಿರುವ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದೇನೆ ಎಂದು ಹೇಳಿದರು.

ಈ ಸಂದರ್ಭ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಭೋಜೆಗೌಡ, ಪಕ್ಷದ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ, ರಾಜ್ಯ ಕಾರ್ಯದರ್ಶಿ ಇಕ್ಬಾಲ್ ಎಲಿಮಲೆ, ಸುಳ್ಯ ಜೆಡಿಎಸ್ ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ರಾಕೇಶ್ ಕುಂಟಿಕಾನ, ನಪಂ ಸದಸ್ಯ ಕೆ.ಎಸ್.ಉಮರ್, ರಮೀಝಾ ಬಾನು, ಹೈದರ್ ಪರ್ತಿಪ್ಪಾಡಿ, ಸುಶೀಲ್ ನೊರೋನ್ಹಾ, ಸೈಯದ್ ಮೀರಾ ಸಾಹೇಬ್ ಕಡಬ, ರತ್ನಾಕರ ಸುವರ್ಣ ಸುಮತಿ ಹೆಗ್ಡೆ, ಅಶ್ರಫ್ ಕಲ್ಲೇಗ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!