March 26, 2026

ಕುಂದಾಪುರ: ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image-1613415768-1659341313406.jpg

ತೆಕ್ಕಟ್ಟೆ: ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರವಡಿ ಶ್ರೀ ಮಲಸಾವರಿ ಅಮ್ಮನವರ ದೇವಸ್ಥಾನ ನ ಸಮೀಪ ಮಣೂರು ಪಡುಕೆರೆ ಬಳಿ ನಡೆದಿದೆ.

ಮಣೂರು ಪಡುಕೆರೆ ಸರಕಾರಿ ಪ್ರೌಢಶಾಲೆಯ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಅನನ್ಯ (13) ‌ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಸೋಮವಾರ ಮುಂಜಾನೆ ಮನೆಯ ಒಳಗೆ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ತಕ್ಷಣವೇ ತೆಕ್ಕಟ್ಟೆ ಫ್ರೆಂಡ್ಸ್ ನ ಆ್ಯಂಬುಲೆನ್ಸ್ ಸಹಾಯದಿಂದ ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಕೂಡಾ ಅಷ್ಟರಲ್ಲಿಯೇ ಅಸುನೀಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!