ಸುಬ್ರಹ್ಮಣ್ಯ: ಮನೆಯ ಮೇಲೆ ಗುಡ್ಡ ಕುಸಿತ:
ಮಣ್ಣಿನಡಿಯಲ್ಲಿ ಸಿಲುಕಿದ ಇಬ್ಬರು ಮಕ್ಕಳು
ಕಡಬ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಪರ್ವತಮುಖಿ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದ ಹಿನ್ನಲೆ ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿರುವ ಘಟನೆ ನಡೆದಿದೆ.
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಪರ್ವತ ಮುಖಿ ಎಂಬಲ್ಲಿ ಕುಶಾಲಾಪ್ಪ ಎಂಬವರ ಮನೆಯ ಮೇಲೆ ಗುಡ್ಡೆ ಕುಸಿದು ಬಿದ್ದ ಹಿನ್ನಲೇ ಕುಶಾಲಾಪ್ಪರ ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಶ್ರುತಿ (11) ಹಾಗೂ ಗಾನ (6)ಸದ್ಯ ಮಣ್ಣಿನಡಿಯಲ್ಲಿ ಸಿಲುಕಿ ಹಾಕಿಗೊಂಡಿದ್ದು, ಸ್ಥಳಕ್ಕೆ ದೌಡಾಯಿಸಿರುವ ಪೊಲೀಸ್ ಇಲಾಖೆ ಹಾಗೂ ಸ್ಥಳೀಯಾಡಳಿತದ ಅಧಿಕಾರಿಗಳು ಮಣ್ಣು ತೆರವುಗೊಳಿಸುವ ಕಾರ್ಯ ಪ್ರಾರಂಭಿಸಿದ್ದು,ರಕ್ಷಣಾ ಕಾರ್ಯ ಮುಂದುವರಿದಿದೆ.





