April 18, 2024

ಅಕ್ರಮ ಆಸ್ತಿ ಸಂಪಾದನೆ ಆರೋಪ: ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಸಹಾಯಕನಿಗೆ 4 ವರ್ಷ ಜೈಲು ಶಿಕ್ಷೆ, 1 ಕೋಟಿ ರೂ. ದಂಡ

0

ಮಂಗಳೂರು: ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಸರ್ಕಾರಿ ಪ್ರಥಮ ದರ್ಜೆ ಸಹಾಯಕನಿಗೆ ಮಂಗಳೂರಿನ ನ್ಯಾಯಾಲಯವು ಸೋಮವಾರ ತಪ್ಪಿತಸ್ಥ ಎಂದು ಪರಿಗಣಿಸಿ 4 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ.ಗಳ ದಂಡವನ್ನು ವಿಧಿಸಿ ಶಿಕ್ಷೆಯನ್ನು ಪ್ರಕಟಿಸಿದೆ.

ಆರೋಪಿಯೂ ಯು. ಓಂ ಪ್ರಕಾಶ್ ಹೆಗ್ಡೆ ಉಪ್ಪಿನಂಗಡಿ ನಿವಾಸಿಯಾಗಿದ್ದು, ಬಂಟ್ವಾಳದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಆದಾಯಕ್ಕಿಂತ ಜಾಸ್ತಿ ಪ್ರಮಾಣದ ಆಸ್ತಿ ಹೊಂದಿದ ಹಿನ್ನಲೆ ಲೋಕಾಯುಕ್ತ ದಾಳಿ ನಡೆಸಿ ೨೦೧೪ ಜನವರಿ ೨೮ ರಂದು ಪ್ರಕರಣ ದಾಖಲಿಸಿತ್ತು.

ಇದೀಗ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ. ಬಿ. ಜಕಾತಿ ಅವರು ಆರೋಪಿ ಓಂ ಪ್ರಕಾಶ್ ಹೆಗ್ಡೆ ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ನಿಬಂಧನೆಗಳ ಅಡಿಯಲ್ಲಿ ತಪ್ಪಿತಸ್ಥರೆಂದು ತೀರ್ಪು ನೀಡಿದರು. ನ್ಯಾಯಾಲಯವು ಅವರಿಗೆ 4 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ.ಗಳ ದಂಡವನ್ನು ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!