March 26, 2026

ಫಾಝಿಲ್ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು: ಕೃತ್ಯ ಎಸಗಿದ ಬಗ್ಗೆ ಒಪ್ಪಿಕೊಂಡ 6 ಮಂದಿ ಆರೋಪಿಗಳು: ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

0
image_editor_output_image332279465-1659421250861.jpg

ಸುರತ್ಕಲ್: ಕಳೆದ ವಾರ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಸುರತ್ಕಲ್ ನ ಫಾಝಿಲ್ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯಕ್ಕೆ ಹಾಜರು ಮಾಡಿದ್ದಾರೆ.

ಸುಹಾಸ್ ಶೆಟ್ಟಿ, ಮೊಹನ್, ಗಿರಿಧರ್, ಅಭಿಷೇಕ್, ಶ್ರೀನುವಾಸ್, ದೀಕ್ಷಿತ್ ಬಂಧಿತರು. ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿದರು.

ಕೊಲೆ ನಡೆಸಲು ಆರೋಪಿಗಳು ಬಳಸಿದ್ದರು ಎನ್ನಲಾದ ಕಾರಿನ‌ ಮಾಲೀಕ ಅಜಿತ್ ಕ್ರಾಸ್ತನನ್ನು ಪೊಲೀಸರು ಭಾನುವಾರ ಬಂಧಿಸಿದ್ದರು. ಬಳಿಕ ಉಡುಪಿ ಜಿಲ್ಲೆಯ ಇನ್ನಾ ಗ್ರಾಮದ ಕಡೆಕುಂಜದಲ್ಲಿ ಭಾನುವಾರ ಪತ್ತೆಯಾಗಿತ್ತು.ಅಜಿತ್ ಕ್ರಾಸ್ತಾ ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ಮತ್ತೆ ಆರು ಮಂದಿಯನ್ನು ಬಂಧಿಸಿದ್ದಾರೆ.

ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಜುಲೈ 28ರ ರಾತ್ರಿ ಫಾಝಿಲ್ ಎಂಬಾತನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಬಗ್ಗೆ ತನಿಖೆ ತೀವ್ರಗೊಳಿಸಿದ್ದ ಪೊಲೀಸರು 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಈ ಬಗ್ಗೆ ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಶಶಿಕುಮಾರ್, “ಫಾಝಿಲ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಇಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದೇವೆ. ಅರೊಪಿಗಳು ಕೃತ್ಯ ಎಸಗಿದ ಬಗ್ಗೆ ಒಪ್ಪಿರುವುದು ಬೆಳಕಿಗೆ ಬಂದಿದೆ” ಎಂದಿದ್ದಾರೆ.

ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ವಶಕ್ಕೆ ಪಡದಿದ್ದ ಪೊಲೀಸರು, ಇಂದು ಬೆಳಗ್ಗೆ ಪಣಂಬೂರು ಎಸಿಪಿ ಕಚೇರಿಯಲ್ಲಿ ಕಮಿಷನರ್ ಮೇಲ್ವಿಚಾರಣೆಯಲ್ಲಿ ವಿಚಾರಣೆ ನಡೆಸಿದ್ದರು.

Leave a Reply

Your email address will not be published. Required fields are marked *

error: Content is protected !!