June 10, 2026

ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಆರೋಪಿಗಳಾದ ಸುಹಾಸ್ ಶೆಟ್ಟಿ, ಮೊಹನ್, ಗಿರಿಧರ್, ಅಭಿಷೇಕ್, ಶ್ರೀನುವಾಸ್, ದೀಕ್ಷಿತ್ ಬಂಧನ

0
image_editor_output_image673207792-1659426159834

ಮಂಗಳೂರು: ಸುರತ್ಕಲ್ ನಲ್ಲಿ ಇತ್ತೀಚೆಗೆ ಬಡೆದ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಸಂಬಂಧ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.

ಸುಹಾಸ್ ಶೆಟ್ಟಿ, ಮೊಹನ್, ಗಿರಿಧರ್, ಅಭಿಷೇಕ್, ಶ್ರೀನುವಾಸ್, ದೀಕ್ಷಿತ್ ಬಂಧಿತರು. ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿದರು.

ಕೊಲೆ ನಡೆಸಲು ಆರೋಪಿಗಳು ಬಳಸಿದ್ದರು ಎನ್ನಲಾದ ಕಾರಿನ‌ ಮಾಲೀಕ ಅಜಿತ್ ಕ್ರಾಸ್ತನನ್ನು ಪೊಲೀಸರು ಭಾನುವಾರ ಬಂಧಿಸಿದ್ದರು. ಬಳಿಕ ಉಡುಪಿ ಜಿಲ್ಲೆಯ ಇನ್ನಾ ಗ್ರಾಮದ ಕಡೆಕುಂಜದಲ್ಲಿ ಭಾನುವಾರ ಪತ್ತೆಯಾಗಿತ್ತು.ಅಜಿತ್ ಕ್ರಾಸ್ತಾ ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ಮತ್ತೆ ಆರು ಮಂದಿಯನ್ನು ಬಂಧಿಸಿದ್ದಾರೆ.

ಜುಲೈ 28 ರಂದು ಸಂಜೆ ಸುರತ್ಕಲ್ ನಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಫಾಝಿಲ್ ಹತ್ಯೆ ನಡೆಸಿದ್ದರು.

ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶುಕುಮಾರ್ ಹಾಗೂ ಅಪರಾಧ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಎಸಿಪಿ ಮಹೇಶ್ ಕುಮಾರ್ ಹಾಗೂ ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ ನೇತೃತ್ವದಲ್ಲಿ ತನಿಖೆ ನಡೆದಿತ್ತು‌.

Leave a Reply

Your email address will not be published. Required fields are marked *

error: Content is protected !!