March 26, 2026

ದ.ಕ ಜಿಲ್ಲೆಯಲ್ಲಿ ಆಗಸ್ಟ್ 5ರ ತನಕ ರಾತ್ರಿ ಕರ್ಫ್ಯೂ ಮುಂದುವರಿಕೆ: ಜಿಲ್ಲಾಧಿಕಾರಿ

0
image_editor_output_image-317098084-1659408351830

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಇನ್ನೂ 2 ದಿನಗಳ ಕಾಲ (ಆ.3ಮತ್ತು 4ರಂದು) ರಾತ್ರಿ ನಿರ್ಬಂಧವನ್ನು ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಆ.5ರ ಬೆಳಗ್ಗೆ 6ವರೆಗೆ ನಿರ್ಬಂಧ ಮುಂದುವರಿಯಲಿದೆ.

ಇತ್ತೀಚಿಗೆ ಬೆಳ್ಳಾರೆ ಮತ್ತು ‌ಸುರತ್ಕಲ್‌ನಲ್ಲಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಂಜೆ 6ರಿಂದ ಮುಂಜಾನೆ 6ರವರೆಗೆ ತುರ್ತು ಸೇವೆಯನ್ನು ಹೊರತುಪಡಿಸಿ ಇತರ ಚಟುವಟಿಕೆಗಳಿಗೆ‌ ನಿರ್ಬಂಧ ಹೇರಲಾಗಿತ್ತು. ಆ.6ರ ತನಕ ಜಿಲ್ಲೆಯಲ್ಲಿ ನಿಷೇಧಾಜ್ಞೆಯೂ ಜಾರಿಯಲ್ಲಿದೆ.

Leave a Reply

Your email address will not be published. Required fields are marked *

error: Content is protected !!