March 25, 2026

ಉಪ್ಪಿನಂಗಡಿ: ಬಸ್ ಮತ್ತು ಕಾರು ನಡುವೆ ಅಪಘಾತ: ಇಬ್ಬರು ಗಂಭೀರ

0
IMG-20220803-WA0005.jpg

ಉಪ್ಪಿನಂಗಡಿ: ಕಾರು ಮತ್ತು ಬಸ್‌ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಮಂಗಳವಾರ ( ಅ .2) ಸಂಜೆ ಸಂಭವಿಸಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಡಬ ತಾಲೂಕಿನ ರಾಮಕುಂಜ ನಿವಾಸಿಗಳಾದ ಉಪನ್ಯಾಸಕ ಗೋವಿಂದರಾಜ್‌ ಶರ್ಮಾ(32) ಮತ್ತು ಓಂಕಾರ್‌ ಪ್ರಸಾದ್‌ (30) ಗಾಯಗೊಂಡವರು.

ಅಪಘಾತವೂ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಕಾರು ಹಾಸನ ಜಿಲ್ಲೆಯ ಸಕಲೇಶಪುರದಿಂದ ಕಡಬ ತಾಲೂಕಿನ ರಾಮಕುಂಜಕ್ಕೆ ಹಿಂತಿರುಗುತ್ತಿದ್ದಾಗ ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಮಧ್ಯೆ ಅಪಘಾತ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!