August 25, 2026

ಕೊಯನಾಡು ರಸ್ತೆಯಲ್ಲಿ ದೊಡ್ಡ ಗಾತ್ರದ ಬಿರುಕು: ಮಂಗಳೂರು-ಮಡಿಕೇರಿ ರಸ್ತೆಯಲ್ಲಿ ಭಾರೀ ವಾಹನಗಳ ನಿಷೇಧ

0
image_editor_output_image421397683-1659502934086.jpg

ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಮಂಗಳವಾರ ರಾತ್ರಿ ಇಡೀ ಧಾರಾಕಾರವಾಗಿ ಮಳೆ ಸುರಿದಿದೆ. ದೇವರಕೊಲ್ಲಿ ಹಾಗೂ ಕೊಯನಾಡು ನಡುವೆ ರಸ್ತೆಯಲ್ಲಿ ದೊಡ್ಡ ಗಾತ್ರದ ಬಿರುಕುಗಳು ಮೂಡಿವೆ.

ಇದರಿಂದ ಖಾಸಗಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೆದ್ದಾರಿಯ ಸ್ಥಿತಿಯನ್ನು ಇಂದು ಪರಿಶೀಲಿಸಲಿದ್ದಾರೆ‌.

ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಯ ಭಾಗಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಗಡಿಭಾಗವಾದ ಕಲ್ಲುಗುಂಡಿ, ಸಂಪಾಜೆ, ಗೂನಡ್ಕ ಗ್ರಾಮಗಳ ಹಲವು ಭಾಗಗಳು ಜಲಾವೃತಗೊಂಡಿವೆ. ಪಯಸ್ವಿನಿ ನದಿ ಮತ್ತಷ್ಟು ಉಕ್ಕೇರಿ ಹರಿಯುತ್ತಿರುವುದು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!