August 25, 2026

ಗ್ರಾಮ ಪಂಚಾಯತ್ ಸದಸ್ಯೆ ಕೊಲೆ: ಮನೆಯ ಅಂಗಳದಲ್ಲಿ ಮೃತದೇಹ ಪತ್ತೆ

0
image_editor_output_image1122894328-1659505840399.jpg

ಮುಂಡಗೋಡ: ತಾಲ್ಲೂಕಿನ ಪಾಳಾ ಗ್ರಾಮ ಪಂಚಾಯಿತಿ ಸದಸ್ಯೆ ಅಕ್ಕಮ್ಮ ಬಸವರಾಜ ಮೇಲಿನಮನಿ ಅವರ ಕೊಲೆಯಾಗಿದೆ. ಬುಧವಾರ ನಸುಕಿನಲ್ಲಿ ಮನೆಯ ಅಂಗಳದಲ್ಲಿ ಮೃತದೇಹ ಕಂಡುಬಂದಿದೆ.

ಅವರ ಗಂಡನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಹುಬ್ಬಳ್ಳಿಯ ‘ಕಿಮ್ಸ್’ಗೆ ದಾಖಲಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಸಿ.ಪಿ.ಐ ಸಿದ್ದಪ್ಪ ಸಿಮಾನಿ, ಪಿ.ಎಸ್.ಐ ಬಸವರಾಜ ಮಬನೂರ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!