March 26, 2026

ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಉಚ್ಚಿಲ ನಿವಾಸಿ ಕಿಶೋರ್: ವದಂತಿ ಹಬ್ಬಿಸಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್

0
image_editor_output_image-1489639518-1659509245573.jpg

ಮಂಗಳೂರು: ವ್ಯಕ್ತಿಯೋರ್ವ ತನ್ನನ್ನು ಯಾರೋ ಬೆನ್ನಟ್ಟಿ ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ವದಂತಿ ಹಬ್ಬಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿರುವುದಾಗಿ ವರದಿಯಾಗಿದೆ.

ವದಂತಿ ಹಬ್ಬಿಸಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಉಚ್ಚಿಲ ನಿವಾಸಿ ಕಿಶೋರ್ ವದಂತಿ ಹಬ್ಬಿಸಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಈತ ಇಂದು ಬೆಳಗ್ಗೆ ಕೆ.ಸಿ.ನಗರ ಮುಳ್ಳುಗುಡ್ಡೆ ಎಂಬಲ್ಲಿ ತನ್ನನ್ನು ಯಾರೋ ಬೆನ್ನಟ್ಟಿ ತಲವಾರು ದಾಳಿಗೆ ಯತ್ನಿಸಿದ್ದಾರೆ ಎಂದು ವದಂತಿ ಹಬ್ಬಿಸಿದ್ದ. ಈ ಬಗ್ಗೆ ಆತನನ್ನು ಪೊಲೀಸರು ವಿಚಾರಣೆ ನಡೆಸಿದ್ದು, ಅಂತಹ ಯಾವುದೇ ಘಟನೆ ನಡೆದಿಲ್ಲ, ತಾನು ಸುಮ್ಮನೆ ಹೇಳಿರುವುದಾಗಿ ತಿಳಿಸಿದ್ದಾನೆ ಎಂದು ಉಳ್ಳಾಲ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಭಾವ್ಯ ಗಲಭೆ ತಪ್ಪಿಸಿದ ಪೊಲೀಸರ ಕ್ರಮಕ್ಕೆ ಸಾರ್ವಜನಿಕರು ಶ್ಲಾಘಿಸಿದ್ದಾರೆ.

‘ತಲವಾರು ದಾಳಿ ಯತ್ನದಂತಹ ಯಾವುದೇ ಘಟನೆ ನಡೆದಿಲ್ಲ. ಸ್ಥಳಕ್ಕೆ ತಾನು ಭೇಟಿ ನೀಡಿ ವದಂತಿ ಹಬ್ಬಿಸಿದ ವ್ಯಕ್ತಿಯನ್ನು ವಿಚಾರಿಸಿದಾಗ, ತಾನು ಹಾಗೆ ಭಾವಿಸಿದ್ದಾಗಿಯೂ ಯಾರೂ ತನ್ನ ಮೇಲೆ ತಲವಾರು ದಾಳಿ ಮಾಡಿಲ್ಲ, ಬೆನ್ನಟ್ಟಿ ಬಂದಿಲ್ಲ ಎಂದು ಆತ ಒಪ್ಪಿಕೊಂಡಿದ್ದಾನೆ. ವದಂತಿ ಹಬ್ಬಿಸಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!