February 4, 2026

ಸುರತ್ಕಲ್: ಪಾಝೀಲ್ ಹಂತಕರು ಆ. 15ರ ವರೆಗೆ ಪೊಲೀಸ್ ಕಸ್ಟಡಿಗೆ

0
image_editor_output_image-286449403-1659544671477

ಮಂಗಳೂರು: ಕೆಲ ದಿನಗಳ ಹಿಂದೆ ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.2 ರಂದು ಬಂಧಿಸಲ್ಪಟ್ಟ ಆರು ಮಂದಿ ಆರೋಪಿಗಳನ್ನು ಮಂಗಳೂರು ನ್ಯಾಯಾಲಯ ಆ.15ರ ವರೆಗೆ ಪೊಲೀಸ್ ಕಸ್ಟಡಿ ವಿಧಿಸಿದೆ.

ಆರೋಪಿಗಳಾದ ಸುಹಾಸ್ ಶೆಟ್ಟಿ, ಮೋಹನ್( ಮೋಹನ್ ಸಿಂಗ್), ಗಿರಿಧರ್, ಅಭಿಷೇಕ್, ಶ್ರೀನಿವಾಸ್, ದೀಕ್ಷಿತ್‌ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಹೆಚ್ಚುವರಿ ವಿಚಾರಣೆಗಾಗಿ ಎರಡು ವಾರಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲು ಕೇಳಿಕೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಅದೇ ರೀತಿ ಆರೋಪಿಗಳಿಗೆ ಕಾರು ಬಾಡಿಗೆಗೆ ನೀಡಿದ್ದ ಆರೋಪಿ ಅಜಿತ್ ಕ್ರಾಸ್ತಾನನ್ನು ಬಂಧಿಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

ಮಂಗಳೂರು ಉತ್ತರ ಎಸಿಪಿ ಮಹೇಶ್ ಕುಮಾರ್ ಪ್ರಕರಣದ ತನಿಖಾಧಿಕಾರಿಯಾಗಿದ್ದು, ಪೊಲೀಸ್ ಕಮಿಷನರ್ ಶಶಿಕುಮಾರ್ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸ್ ತಂಡ ಆರೋಪಿಗಳನ್ನು ಬಂಧಿಸಿತ್ತು.

ಬಂಧಿತ ಆರೋಪಿಗಳನ್ನು ಮಂಗಳವಾರವೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳನ್ನು ಆ.15ರ ವರೆಗೆ ಪೊಲೀಸ್ ಕಸ್ಟಡಿಗೆ ವಿಧಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!