February 4, 2026

ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಶಾಲಾ-ಕಾಲೇಜ್ ಗಳಿಗೆ ನಾಳೆ(ಗುರುವಾರ) ರಜೆ ಘೋಷಣೆ

0
IMG-20220803-WA0004.jpg

ಮಂಗಳೂರು, ನಿರಂತರವಾಗಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನಲ್ಲಿ ಆಗಸ್ಟ್ 4ರ ಗುರುವಾರದಂದು ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ನಿರಂತರ ಮಳೆಯ ಕಾರಣದಿಂದಾಗಿ ಹಲವು ಕಡೆಗಳಲ್ಲಿ ಗುಡ್ಡ ಕುಸಿತ, ಭೂ ಕುಸಿತವುಂಟಾಗಿದೆ. ಸೇತುವೆಗಳು, ರಸ್ತೆಗಳು ಜಲಾವೃತಗೊಂಡಿವೆ. ಅಲ್ಲದೆ, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸುಳ್ಯ ತಾಲೂಕಿನಲ್ಲಿ ಅಂಗನವಾಡಿ ಕೇಂದ್ರ, ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ.
ಕಡಬ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಮಳೆ ಮುಂದುವರೆದಲ್ಲಿ ಸ್ಥಳೀಯ ಬಿಇಒ ಅವರು ತಹಶೀಲ್ದಾರ್ ಅವರ ಮೂಲಕ ರಜೆ ನಿರ್ಧಾರ ಕೈಗೊಳ್ಳಬಹುದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!