May 14, 2026

ಮೂಡುಬಿದಿರೆ: ಮಹಾವೀರ ಕಾಲೇಜು ಬಳಿ ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

0
image_editor_output_image1178641329-1659593623816.jpg

ಮೂಡುಬಿದಿರೆ: ಇಲ್ಲಿನ ಮಹಾವೀರ ಕಾಲೇಜು ಬಳಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.4ರ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಮೃತರನ್ನು ಕೀರ್ತಿನಗರದ ನಿವಾಸಿ ಅಲ್ಫೋನ್ಸ್ ( 68) ಎಂದು ಗುರುತಿಸಲಾಗಿದೆ.

ಅಲ್ಫೋನ್ಸ್ ಅವರು ಕಳೆದ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಮನೆಯವರು ರಾತ್ರಿ ಮಲಗಿದ್ದ ಸಂದರ್ಭ ಬಾವಿಗೆ ಹಾರಿದ್ದು ಬೆಳಗ್ಗೆ ಹುಡುಕಾಡಿದಾಗ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದೆ.

ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!