ಜೆಡಿಎಸ್ ‘ಜನತಾ ಜಲಧಾರೆ’ ಕಾರ್ಯಕ್ರಮದ ಪರಿಣಾಮದಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ: ಎಚ್.ಡಿ ಕುಮಾರಸ್ವಾಮಿ
ಚನ್ನಪಟ್ಟಣ: ನಮ್ಮ ಪಕ್ಷದ ಪಂಚರತ್ನ ಯೋಜನೆಗಳಲ್ಲಿ ಒಂದಾದ ‘ಜನತಾ ಜಲಧಾರೆ’ ಕಾರ್ಯಕ್ರಮ ರಾಜ್ಯದಲ್ಲಿ ಯಾತ್ರೆ ಮಾಡಿದ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣ ತಾಲ್ಲೂಕಿನ ಕೂಡ್ಲೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಗುರುವಾರ ವಸತಿ ಇಲಾಖೆ, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಇಲಾಖೆ, ರಾಜೀವ್‍ಗಾಂಧಿ ವಸತಿ ನಿಗಮದ ಸಹಯೋಗದಲ್ಲಿ ನಡೆದ ಎರಡನೇ ಹಂತದ ನಿವೇಶನಗಳ ಹಕ್ಕುಪತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.




