August 25, 2026

ಕಾಸರಗೋಡು: ಕಾರಿನಲ್ಲಿ ಮಾದಕ ವಸ್ತು ಸಾಗಾಟ, ಕಣ್ಣೂರಿನ‌ ಇಬ್ಬರು ಆರೋಪಿಗಳ ಬಂಧನ

0
image_editor_output_image618379793-1659689170981.jpg

ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ ಸಾಗಾಟ ಮಾಡುತ್ತಿದ್ದ ಮಾದಕ ವಸ್ತು ಸಹಿತ ಇಬ್ಬರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಸಕ್ಸೇನಾ ನೇತೃತ್ವದ ವಿಶೇಷ ತಂಡ ಬಂಧಿಸಿದೆ.

ಬಂಧಿತರನ್ನು ಕಣ್ಣೂರು ಮಾಡಾಯಿಯ ನಿಜಾಮ್ (32) ಮತ್ತು ಮುಹಮ್ಮದ್ ತಾಹಾ ,(20) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಎರಡು ಕಿಲೋ ಗಾಂಜಾ ಹಾಗೂ 25 ಗ್ರಾಂ ಎಂ ಡಿ ಎಂ ಎ ಮಾದಕ ವಸ್ತು ಸಹಿತ, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ನೀಲೇಶ್ವರ ಪಳ್ಳಿ ಕೆರೆ ಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಅಕ್ರಮ ಸಾಗಾಟ ಪತ್ತೆಯಾಗಿದೆ. ಕಾರಲಿದ್ದವರ ಚಲನವ ಲನ ಗಮನಿಸಿದ ಪೊಲೀಸರು ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ ಪತ್ತೆಯಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!