ಪುತ್ತೂರು: ಪ್ಲ್ಯಾಟ್ ನ 5ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಗಂಭೀರ
ಪುತ್ತೂರು: ಬಾಲಕನೋರ್ವ ಪ್ಲಾಟ್ ನಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಬೊಳುವಾರಿನಲ್ಲಿ ನಡೆದಿದೆ.
ಮನೋಹರ್ ರೈ ಎಂಬವರ ಪುತ್ರ ಸುದಾನ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಹಾನ್ ರೈ ಗಂಭೀರ ಗಾಯಗೊಂಡ ಬಾಲಕ ಎಂದು ಗುರುತಿಸಲಾಗಿದೆ.
ಸುಹಾನ್ ಮನೆಯವರೊಂದಿಗೆ ವಾಸವಿದ್ದ ಬೊಳುವಾರಿನ ಪ್ಲಾಟ್ ನ 5ನೇ ಮಹಡಿಯಿಂದ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಆತನನ್ನು ಪುತ್ತೂರಿನ ಆಸ್ಪತ್ರೆಗೆ ಕರೆ ತರಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಬಾಲಕನ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..





