February 2, 2026

ಸಿ.ಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್: ದೆಹಲಿ ಪ್ರವಾಸ ರದ್ದು

0
image_editor_output_image-283306966-1659759914065

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ಅವರಿಗೆ ಮತ್ತೊಮ್ಮೆ ಕೊರೊನಾ ಸೋಂಕು (Corona virus)ದೃಢಪಟ್ಟಿದ್ದು, ಇಂದಿನ ದೆಹಲಿ ಪ್ರವಾಸ ರದ್ದುಪಡಿಸಿದ್ದಾರೆ.

ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ.

ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!